ಶನಿವಾರ, ಜನವರಿ 29, 2022
17 °C

Karnataka Covid-19 Update: 322 ಕೋವಿಡ್ ಪ್ರಕರಣ ದೃಢ, ಇಬ್ಬರು ಸೋಂಕಿತರು ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 322 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 162 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎಂಬುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಈವರೆಗೆ ಒಟ್ಟು 29,96,470 ಮಂದಿ ಸೋಂಕಿತರಾಗಿದ್ದು, 38,213 ಮಂದಿ ಸೋಂಕಿತರು ಅಸುನೀಗಿದ್ದಾರೆ. 29,51,654 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಸದ್ಯ ರಾಜ್ಯದಲ್ಲಿ 6,574 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಹೊಸದಾಗಿ 165 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 72 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಬ್ಬ ಸೋಂಕಿತ ಸಾವಿಗೀಡಾಗಿದ್ದು, ಸದ್ಯ 4,925 ಸಕ್ರಿಯ ಪ್ರಕರಣಗಳಿವೆ.

ಮೈಸೂರಿನಲ್ಲಿ 47, ಶಿವಮೊಗ್ಗ, ಹಾಸನ, ದಕ್ಷಿಣಕನ್ನಡದಲ್ಲಿ ತಲಾ 13, ಉಡುಪಿ, ಧಾರವಾಡದಲ್ಲಿ ತಲಾ 10, ಕೊಡಗಿನಲ್ಲಿ 9, ತುಮಕೂರು, ಮಂಡ್ಯದಲ್ಲಿ ತಲಾ 6, ಚಿತ್ರದುರ್ಗದಲ್ಲಿ 4, ಉತ್ತರಕನ್ನಡದ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 3, ಕೋಲಾರ, ಬೆಳಗಾವಿ, ಬಳ್ಳಾರಿಯಲ್ಲಿ ತಲಾ 2, ರಾಮನಗರ, ರಾಯಚೂರು, ಕಲಬುರಗಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಲಾ 1 ಪ್ರಕರಣ ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು