ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: 357 ಹೊಸ ಪ್ರಕರಣ, 10 ಸಾವು

Last Updated 13 ಅಕ್ಟೋಬರ್ 2021, 13:15 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 357 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟದ್ದಾರೆ. 438 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,82,089ಕ್ಕೆ ಏರಿದ್ದು, ಸದ್ಯ, 9,621 ಸಕ್ರಿಯ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ 37,916 ಮಂದಿ ಕೋವಿಡ್‌ನಿಂದ ಅಸುನೀಗಿದ್ಧಾರೆ.

ಕೋವಿಡ್ ದೃಢ ಪ್ರಮಾಣ 0.31ರಷ್ಟಿದ್ದು, ಸಾವಿನ ದರ ಶೇಕಡಾ 2.80ರಷ್ಟಿದೆ.

ಬೆಂಗಳೂರಿನಲ್ಲಿ ಇಂದು 140 ಕೋವಿಡ್ ಪ್ರಕರಣಗಳು ದಾಖಲಾಗಿದ್ದು 5 ಮಂದಿ ಸಾವಿಗೀಡಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ 35, ಹಾಸನದಲ್ಲಿ 26, ತುಮಕೂರಿನಲ್ಲಿ 27 ಪ್ರಕರಣ ದಾಖಲಾಗಿವೆ. 5 ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT