ಭಾನುವಾರ, ಮೇ 29, 2022
31 °C

Karnataka Covid-19 Updates: 405 ಹೊಸ ಪ್ರಕರಣ, 4 ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 405 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 267 ಮಂದಿ ಚೇತರಿಸಿಕೊಂಡಿದ್ದಾರೆ.  ಇದೇ ಅವಧಿಯಲ್ಲಿ 4 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಈ ಮೂಲಕ ಕೋವಿಡ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 30,03,969ಕ್ಕೆ ಏರಿದ್ದು, ಈವರೆಗೆ 38,305 ಸೋಂಕಿತರು ಅಸುನೀಗಿದ್ಧಾರೆ.

ರಾಜ್ಯದಲ್ಲಿ ಸದ್ಯ 7,251 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 29,58,384 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ಧಾರೆ.

ಕೋವಿಡ್ ದೃಢ ಪ್ರಮಾಣ ಶೇಕಡ 0.35 ರಷ್ಟಿದ್ದು, ಮರಣ ಪ್ರಮಾಣ ಶೇಕಡ 0.98ರಷ್ಟಿದೆ.

ಬೆಂಗಳೂರು ನಗರದಲ್ಲಿ ಇಂದು 254 ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 20 ಮತ್ತು ಉತ್ತರ ಕನ್ನಡದಲ್ಲಿ 32 ಪ್ರಕರಣಗಳು ದಾಖಲಾಗಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು