ಸೋಮವಾರ, ಜೂನ್ 14, 2021
26 °C

Covid-19 Karnataka Updates: ರಾಜ್ಯದಲ್ಲಿ 34,057 ಮಂದಿ ಕೋವಿಡ್‌ನಿಂದ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿದ್ದು, 24 ಗಂಟೆಗಳ ಅವಧಿಯಲ್ಲಿ 35,297 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ಒಂದು ದಿನದ ಅವಧಿಯಲ್ಲಿ 1.27 ಲಕ್ಷ ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 27.64ರಷ್ಟಿದೆ. ಈ ತಿಂಗಳು 13 ದಿನಗಳಲ್ಲಿ 5.65 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 20.88 ಲಕ್ಷ ದಾಟಿದೆ. ಸೋಂಕಿತರಲ್ಲಿ ಬೆಂಗಳೂರಿನಲ್ಲಿ 161 ಮಂದಿ ಸೇರಿದಂತೆ ರಾಜ್ಯದಲ್ಲಿ 344 ಮಂದಿ ಸಾವಿಗೀಡಾಗಿರುವುದು ಖಚಿತಪಟ್ಟಿದೆ. ಈವರೆಗೆ ಕೋವಿಡ್‌ಗೆ ಮೃತಪಟ್ಟವರ ಒಟ್ಟು ಸಂಖ್ಯೆ 20,712ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಚೇತರಿಸಿಕೊಳ್ಳುವವರ ಸಂಖ್ಯೆ ಏರಿಕೆ ಕಂಡಿದ್ದು, ಮತ್ತೆ 34,057 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 14.74 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 5.93 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರು (15,191), ಮೈಸೂರು (1,260) ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಕಂಡಿದೆ. ತುಮಕೂರು (1,798), ಬಳ್ಳಾರಿ (1,865), ಮಂಡ್ಯ (1,153), ಬೆಂಗಳೂರು ಗ್ರಾಮಾಂತರ (1,073) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ರಾಜ್ಯದ 27 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಮರಣ ಪ್ರಕರಣಗಳು ದೃಢಪಟ್ಟಿವೆ. ಬಹುತೇಕರು ಗಂಭೀರ ಉಸಿರಾಟದ ಸಮಸ್ಯೆ ಹಾಗೂ ತೀವ್ರ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯನ್ನು ಎದುರಿಸಿದ್ದಾರೆ. ಮೈಸೂರಿನಲ್ಲಿ 15 ಮಂದಿ, ಉತ್ತರ ಕನ್ನಡ ಹಾಗೂ ಬಳ್ಳಾರಿಯಲ್ಲಿ ತಲಾ 14 ಮಂದಿ, ಬೆಂಗಳೂರು ಗ್ರಾಮಾಂತರದಲ್ಲಿ 13 ಮಂದಿ, ತುಮಕೂರು ಹಾಗೂ ಮಂಡ್ಯದಲ್ಲಿ ತಲಾ 11 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು