Karnataka Covid-19 Update: ದಿನದ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಈ ತಿಂಗಳು 50 ಸಾವಿರದ ಗಡಿ ದಾಟಿದ್ದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ, ಶುಕ್ರವಾರ 31,198ಕ್ಕೆ ಇಳಿಕೆಯಾಗಿದೆ.
ಕೋವಿಡ್‌ನಿಂದ ಚೇತರಿಸಿ ಕೊಳ್ಳುವವರ ಸಂಖ್ಯೆ ಮತ್ತಷ್ಟು ಹೆಚ್ಚಳ ವಾಗಿದೆ. ಸೋಂಕಿ ತರಲ್ಲಿ 71,092 ಮಂದಿ ಗುಣಮುಖ ರಾಗಿದ್ದಾರೆ. ಕೋವಿಡ್ ಕಾಣಿಸಿಕೊಂಡಾಗಿನಿಂದ ಈವರೆಗೆ 24 ಗಂಟೆಗಳ ಅವಧಿಯಲ್ಲಿ ಚೇತರಿಕೆ ಹೊಂದಿದವರ ಗರಿಷ್ಠ ಸಂಖ್ಯೆ ಇವಾಗಿವೆ. ಒಂದು ದಿನದ ಅವಧಿಯಲ್ಲಿ 1.49 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.
ಸೋಂಕು ದೃಢ ಪ್ರಮಾಣ ಶೇ 20.91 ರಷ್ಟಿದೆ. ನಾಲ್ಕು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ, 25 ಜಿಲ್ಲೆಗಳಲ್ಲಿ ಮೂರು ಅಂಕಿಯಲ್ಲಿದೆ. ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, 15,199 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಮೈಸೂರಿನಲ್ಲಿ 1,877, ಧಾರವಾಡದಲ್ಲಿ 1,500, ತುಮಕೂರಿನಲ್ಲಿ 1,315 ಹಾಗೂ ಹಾಸನದಲ್ಲಿ 1,037 ಮಂದಿ ಹೊಸದಾಗಿ ಸೋಂಕಿತ ರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 37.23 ಲಕ್ಷಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2.88 ಲಕ್ಷಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿಯೇ 1.60 ಲಕ್ಷ ಸೋಂಕಿತರು ಇದ್ದಾರೆ. ಕೋವಿಡ್‌ನಿಂದ ಶುಕ್ರವಾರ ಚೇತರಿಸಿಕೊಂಡವರಲ್ಲಿ 44,866 ಮಂದಿ ಬೆಂಗಳೂರಿನವರೆ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 33.96 ಲಕ್ಷಕ್ಕೆ ತಲುಪಿದೆ. 50 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
ಇಂದಿನ 28/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/xEdj6oy5SP @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/MDF5JBeE69
— K'taka Health Dept (@DHFWKA) January 28, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.