ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Updates: 21 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಪತ್ತೆ

Last Updated 28 ಡಿಸೆಂಬರ್ 2021, 16:34 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ 21 ಜಿಲ್ಲೆಗಳಲ್ಲಿಕೋವಿಡ್ ಪ್ರಕರಣಗಳು ಮಂಗಳವಾರ ಪತ್ತೆಯಾಗಿವೆ. 356 ಮಂದಿ ಹೊಸದಾಗಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ಒಂದು ದಿನದ ಅವಧಿಯಲ್ಲಿ 69 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.50ರಷ್ಟಿದೆ. ಮೂರು ಜಿಲ್ಲೆಗಳಲ್ಲಿಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 17ಜಿಲ್ಲೆಗಳಲ್ಲಿಒಂದಂಕಿಯಲ್ಲಿದೆ. ಯಾದಗಿರಿ, ರಾಮನಗರ ಸೇರಿದಂತೆ 9ಜಿಲ್ಲೆಗಳಲ್ಲಿಹೊಸ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಮತ್ತೆ269 ಮಂದಿಕೋವಿಡ್ಪೀಡಿತರಾಗಿದ್ದಾರೆ. ಉಡುಪಿಯಲ್ಲಿ 20, ಮೈಸೂರು ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 10 ಪ್ರಕರಣಗಳುವರದಿಯಾಗಿವೆ.ಉಳಿದಜಿಲ್ಲೆಗಳಲ್ಲಿಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.05 ಲಕ್ಷಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 347 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,456ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ 6,122 ಸೋಂಕಿತರಿದ್ದಾರೆ.ಯಾದಗಿರಿ ಹಾಗೂ ಗದಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಬೀದರ್, ಹಾವೇರಿ ಸೇರಿದಂತೆ ಆರು ಜಿಲ್ಲೆಗಳಲ್ಲಿಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ಕೋವಿಡ್ಪೀಡಿತರಲ್ಲಿ ಬೆಂಗಳೂರು ನಗರ ಹಾಗೂ ಹಾಸನದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.56 ರಷ್ಟು ಇದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,318ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 8.5 ಕೋಟಿ ಡೋಸ್‌ ಲಸಿಕೆ
ಕೋವಿಡ್‌ ಲಸಿಕಾಕರಣದ ಭಾಗವಾಗಿ ಇದುವರೆಗೆ ರಾಜ್ಯದಲ್ಲಿ 8.5 ಕೋಟಿಗೂ ಅಧಿಕ ಡೋಸ್‌ಗಳನ್ನು ನೀಡಲಾಗಿದೆ. ಇದೊಂದು ಗಮನಾರ್ಹ ಮೈಲುಗಲ್ಲು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

4.74 ಕೋಟಿ ಮೊದಲ ಡೋಸ್‌, 3.76 ಕೋಟಿ ಎರಡನೇ ಡೋಸ್‌ ನೀಡಲಾಗಿದೆ. 5,916 ಸರ್ಕಾರಿ ಮತ್ತು 192 ಖಾಸಗಿ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT