ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Updates: ಹೊಸದಾಗಿ 1,562 ಕೋವಿಡ್ ಪ್ರಕರಣಗಳು ದೃಢ

Last Updated 22 ಜುಲೈ 2022, 16:26 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 1,562 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 1,107 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,488 ರಷ್ಟಾಗಿದೆ.

ದಿನದ ಕೋವಿಡ್ ದೃಢ ಪ್ರಮಾಣ ಶೇಕಡ 4.67ರಷ್ಟಿದ್ದು, ವಾರದ ಕೋವಿಡ್ ದೃಢ ಪ್ರಮಾಣ 4.75ರಷ್ಟಿದೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು 1,244 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ಗ್ರಾಮಾಂತರದಲ್ಲಿ 48, ಧಾರವಾಡದಲ್ಲಿ 38, ಮೈಸೂರಿನಲ್ಲಿ 34, ದಕ್ಷಿಣ ಕನ್ನಡದಲ್ಲಿ 28 ಮತ್ತು ಬೆಳಗಾವಿಯಲ್ಲಿ 27 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT