ಸೋಮವಾರ, ಅಕ್ಟೋಬರ್ 3, 2022
24 °C

Karnataka Covid Updtes: ಹೊಸದಾಗಿ 886 ಪ್ರಕರಣಗಳು ದೃಢ, 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 886 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಮೂವರು ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 1,999 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ.

ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ 40,155 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್ ದಿನದ ಪಾಸಿಟಿವಿಟಿ ದರ ಶೇಕಡ 4.06ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 6.36ರಷ್ಟಿದೆ.

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು 608 ಪ್ರಕರಣಗಳು ವರದಿಯಾಗಿದ್ದು, ಬಳ್ಳಾರಿಯಲ್ಲಿ 36 ಮತ್ತು ತುಮಕೂರಿನಲ್ಲಿ 24 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು