ಶನಿವಾರ, ಆಗಸ್ಟ್ 13, 2022
23 °C

Covid-19 Karnataka Update: ರಾಜ್ಯದಲ್ಲಿ 25,046 ಸಕ್ರಿಯ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್ ನಿಯಂತ್ರಿಸಲು ಅನುಸರಿಸಬೇಕಾದ ಮಾರ್ಗಗಳನ್ನು ಒಳಗೊಂಡ ಪೋಸ್ಟರ್‌ ಅಂಟಿಸುತ್ತಿರುವ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,247 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದಾರೆ. 

ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,90,360 ತಲುಪಿದ್ದು, ಈ ಪೈಕಿ 8,53,461 ಮಂದಿ ಗುಣಮುಖರಾಗಿದ್ದಾರೆ ಹಾಗೂ 11,834 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 25,046 ಸಕ್ರಿಯ ಪ್ರಕರಣಗಳಿವೆ. 

ಶುಕ್ರವಾರ 877 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 287 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 620 ಪ್ರಕರಣಗಳು ದಾಖಲಾಗಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ. ಹಾಸನದಲ್ಲಿ 49, ಮಂಡ್ಯದಲ್ಲಿ 53, ತುಮಕೂರಿನಲ್ಲಿ 73,  ಮೈಸೂರಿನಲ್ಲಿ 74 ಹಾಗೂ ದಕ್ಷಿಣ ಕನ್ನಡದಲ್ಲಿ 42 ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು