ಶುಕ್ರವಾರ, ಅಕ್ಟೋಬರ್ 29, 2021
20 °C

Karnataka Covid-19 Update: ರಾಜ್ಯದಲ್ಲಿ 9,712 ಪ್ರಕರಣಗಳು ಸಕ್ರಿಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 332 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 11 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 515 ಜನ ಚೇತರಿಸಿಕೊಂಡಿದ್ದಾರೆ.

ಪ್ರಸ್ತುತ ಕರ್ನಾಟಕದಲ್ಲಿ 9,712 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ದೃಢ ಪ್ರಮಾಣ ಶೇಕಡ 0.41 ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇಕಡ 3.31ರಷ್ಟು ದಾಖಲಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 29,81,732 ತಲುಪಿದ್ದು, ಈ ಪೈಕಿ 29,34,085 ಮಂದಿ ಗುಣಮುಖರಾಗಿದ್ದಾರೆ ಹಾಗೂ 37,906 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 145 ಪ್ರಕರಣಗಳು, ಮೈಸೂರಿನಲ್ಲಿ 39, ದಕ್ಷಿಣ ಕನ್ನಡದಲ್ಲಿ 27, ಉಡುಪಿಯಲ್ಲಿ 17, ತುಮಕೂರು ಮತ್ತು ಉತ್ತರ ಕನ್ನಡದಲ್ಲಿ ತಲಾ 12 ಹೊಸ ಪ್ರಕರಣಗಳು ದಾಖಲಾಗಿವೆ. ಹನ್ನೊಂದು ಜಿಲ್ಲೆಗಳಲ್ಲಿ ಕೋವಿಡ್‌ ಹೊಸ ಪ್ರಕರಣ ವರದಿಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು