ಸೋಮವಾರ, ಅಕ್ಟೋಬರ್ 18, 2021
22 °C

Karnataka Covid-19 Update: ಮೃತರ ಸಂಖ್ಯೆ 37,717ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪೀಡಿತರಲ್ಲಿ 11 ಮಂದಿ ಮೃತಪಟ್ಟಿರುವುದು ಶನಿವಾರ ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ. 

ಹೊಸದಾಗಿ 787 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಾದವರ ಒಟ್ಟು ಸಂಖ್ಯೆ 29.72 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 1.40 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.55 ರಷ್ಟು ವರದಿಯಾಗಿದೆ. 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 12 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 127, ಮೈಸೂರಿನಲ್ಲಿ 65 ಹಾಗೂ ಕೊಡಗಿನಲ್ಲಿ 25 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 276 ಹಾಗೂ ಉಡುಪಿಯಲ್ಲಿ 68 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.

ಸೋಂಕಿತರಲ್ಲಿ 775 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.21 ಲಕ್ಷ ದಾಟಿದೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 13,307ಕ್ಕೆ ಏರಿಕೆಯಾಗಿದೆ.

6 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 4, ಬೆಳಗಾವಿ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ.  ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉಡುಪಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ದರವು ಶೇ 1.39 ರಷ್ಟು ವರದಿಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು