ಬೆಂಗಳೂರು: ರಾಜ್ಯದಲ್ಲಿ ಭಾನುವಾರ 664 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,819 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 29,27,740 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 12,301 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.52 ರಷ್ಟಿದ್ದು, ಮರಣ ಪ್ರಮಾಣ ಶೇ 1.20 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.