ಬೆಂಗಳೂರು: ರಾಜ್ಯದಲ್ಲಿ ಗುರುವಾರ 836 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,71,044 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,683 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.
ಇದುವರೆಗೆ 29,19,742 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 13,590 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 310 ಹೊಸ ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಕೊನೆಯುಸಿರೆಳೆದಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 106, ಮೈಸೂರು 78, ಉಡುಪಿ 69, ಹಾಸನ 47, ಕೊಡಗು 37, ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಹೊಸ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.57 ರಷ್ಟಿದ್ದು, ಮರಣ ಪ್ರಮಾಣ ಶೇ 1.79 ರಷ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.