ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ಕೋಟಿ ಲಸಿಕೆಗೆ ಜಾಗತಿಕ ಟೆಂಡರ್: ಡಾ.ಸಿ.ಎನ್‌. ಅಶ್ವತ್ಥನಾರಾಯಣ

Last Updated 11 ಮೇ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವುದರಿಂದ, ಎರಡು ಕೋಟಿ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿಸಲಾಗುವುದು’ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಂಗಳವಾರ ತಿಳಿಸಿದರು.

ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ 1 ಕೋಟಿ ಕೋವ್ಯಾಕ್ಸಿನ್‌ ಮತ್ತು 2 ಕೋಟಿ ಕೋವಿಶೀಲ್ಡ್‌ ಲಸಿಕೆಗೆ ಬೇಡಿಕೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಹಂಚಿಕೆ ಮಾಡುತ್ತಿದ್ದ ಲಸಿಕೆ ಬಿಟ್ಟರೆ, ಈವರೆಗೆ ಟೆಂಡರ್‌ ಕರೆದು ಲಸಿಕೆ
ಖರೀದಿಸಿರಲಿಲ್ಲ. ‌ಟೆಂಡರ್‌ ಪಡೆಯುವ ಕಂಪನಿ ಏಳು ದಿನಗಳ ಒಳಗೆ ಈ ಪ್ರಕ್ರಿಯೆ ಮುಗಿಸಿ, ಪೂರೈಕೆ ಆರಂಭಿಸುವಂತೆ ಸೂಚಿಸಲಾಗಿದೆ’ ಎಂದರು.

‘ಎಲ್ಲ ಜಿಲ್ಲೆ ಮತ್ತು ತಾಲ್ಲೂಕುಗಳಿಗೆ ಹಂಚಲು ಒಂದು ಲಕ್ಷ ಪಲ್ಸ್ ಆಕ್ಸಿ ಮೀಟರ್‌ಗಳನ್ನು ಖರೀದಿಸಲು ಸೂಚಿಸಲಾಗಿದೆ. ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮತ್ತು ಸೋಂಕಿತರು ಗುಣಮುಖರಾದ ಬಳಿಕ ವಾಪಸ್‌ ಪಡೆಯುವುದು ಆಯಾ ವೈದ್ಯಾಧಿಕಾರಿಗಳ ಹೊಣೆ. ಪಲ್ಸ್ ಆಕ್ಸಿ ಮೀಟರ್‌ಗಳ ಬ್ಯಾಂಕ್ ಮಾಡುವ ಉದ್ದೇಶವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT