ಶನಿವಾರ, ಜುಲೈ 2, 2022
20 °C

ನೈತಿಕ ಪೊಲೀಸಗಿರಿಗೆ ಕುಮ್ಮಕ್ಕು ಕೊಟ್ಟರೆ ಹೂಡಿಕೆದಾರರು ಬರುವುದಿಲ್ಲ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ನೈತಿಕ ಪೊಲೀಸಗಿರಿಗೆ ಬಿಜೆಪಿಯವರು ಕುಮ್ಮಕ್ಕು ಕೊಟ್ಟರೆ ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಹೂಡಿಕೆದಾರರು ಬರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಎಚ್ಚರಿಸಿದರು.

‘ಈಗಾಗಲೇ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕಬ್ಬಿಣ, ಸಿಮೆಂಟ್‌, ತೈಲ ದರ ಹೆಚ್ಚಾಗಿದೆ. ಪೆಟ್ರೋಲ್‌, ಡೀಸೆಲ್‌ ಹೆಸರಿನಲ್ಲಿ ಬಿಜೆಪಿಯವರು ‘ಡೈಲಿ ಪಿಕ್‌ ಪಾಕೆಟ್‌’ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಕೋಮು ಭಾವನೆ ಕೆರಳಿಸಿ ದೇಶ ಇಬ್ಭಾಗ ಮಾಡುತ್ತಿದ್ದಾರೆ. ಕೋಮುಭಾವನೆ ಕೆರಳಿಸಿ ಲಾಭ ಮಾಡಿಕೊಳ್ಳಬಹುದು ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಇಡೀ ನಮ್ಮ ವ್ಯವಸ್ಥೆ ನಾಶವಾಗುತ್ತಿದೆ. ಅನೇಕ ಜನ ಹೂಡಿಕೆದಾರರು ದೇಶ ಬಿಟ್ಟು ಹೋಗಿದ್ದಾರೆ. ಬರುವ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು’ ಎಂದು ಗುರುವಾರ ಸಂಜೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.

‘ನೈತಿಕ ಪೊಲೀಸಗಿರಿಗೆ ಸ್ವತಃ ಮುಖ್ಯಮಂತ್ರಿಯವರೇ ಕುಮ್ಮಕ್ಕು ಕೊಟ್ಟಿದ್ದಾರೆ. ಬರುವ ದಿನಗಳಲ್ಲಿ ಇದರಿಂದ ಅಪಾಯವಿದೆ ಎಂದು ಸಿ.ಎಂ.ಗೆ ಕಿವಿಮಾತು ಹೇಳುತ್ತಿದ್ದೇನೆ. ನಮಗೆ ಸಂವಿಧಾನ, ಜಾತ್ಯತೀತ ತತ್ವ ಬಹಳ ಮುಖ್ಯ. ಆದರೆ, ಧರ್ಮ ಬಿಡಲು ಯಾರಿಗೂ ಹೇಳಿಲ್ಲ. ಯಾರ್‍ಯಾರಿಗೆ ಯಾವ ಧರ್ಮದ ಆಚರಣೆಗಳನ್ನು ಪಾಲಿಸಬೇಕು ಅನಿಸುತ್ತದೆಯೋ ಅವರು ಪಾಲಿಸಬಹುದು. ಭಗವದ್ಗೀತೆ, ಕುರಾನ್‌, ಬೈಬಲ್‌ ಕೂಡ ಸಂವಿಧಾನವಿದ್ದಂತೆಯೇ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು