ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು: ₹1,577 ಕೋಟಿ ವೆಚ್ಚದ ಯೋಜನೆಗಳಿಗೆ ಒಪ್ಪಿಗೆ

Last Updated 25 ನವೆಂಬರ್ 2021, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಜೀವನ್‌ ಮಿಷನ್‌ ಕುಡಿಯುವ ನೀರಿನ ಯೋಜನೆಗಳಿಗಾಗಿ ₹1,577 ಕೋಟಿ ಒದಗಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಯಾದಗಿರಿ ಜಿಲ್ಲೆಯಎಲ್ಲಾ ಗ್ರಾಮೀಣ ವಸತಿಗಳಿಗೆಮತ್ತು 3 ನಗರ ಸ್ಥಳೀಯಸಂಸ್ಥೆಗಳಾದ ಕಕ್ಕೇರಾ, ಕೆಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಕುಡಿಯುವ ನೀರನ್ನು ಒದಗಿಸುವ ₹1,358.62 ಕೋಟಿ ಮೊತ್ತದಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದಿರೆ ತಾಲ್ಲೂಕಿನ 39 ಹಳ್ಳಿಗಳಿಗೆ (583 ಜನವಸತಿ) ₹145.48 ಕೋಟಿ ಹಾಗೂಬಂಟ್ವಾಳ ಮತ್ತು ಮಂಗಳೂರು ಅನುಮೋದನೆ ನೀಡಲಾಗಿದೆ.

ಅಲ್ಲದೆ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಘಟ್ಟಿ ಬಸವಣ್ಣಾ ಕುಡಿಯುವ ನೀರು ಸರಬರಾಜು ಯೋಜನೆಗೆ ₹990 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿಗೆ(ಡಿಪಿಆರ್) ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತರ ಪ್ರಮುಖ ನಿರ್ಧಾರಗಳು

l ₹41 ಕೋಟಿ ಅಂದಾಜು ವೆಚ್ಚದಲ್ಲಿ 164 ‘ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ’ ವಾಹನಗಳನ್ನು ಖರೀದಿಸಲು ನಿರ್ಧಾರ.

l ನಬಾರ್ಡ್‌ ಪ್ರಾಯೋಜಿತ ಆರ್‌ಐಡಿಎಫ್‌–27 ಯೋಜನೆಗಳಡಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಗೆ ಅನುಮೋದನೆಯಾಗಿರುವ ₹79.66 ಕೋಟಿ ಮೊತ್ತದ ಸಿವಿಲ್‌ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ.

l ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಲಬುರಗಿ ಜಿಲ್ಲೆಯ ಜೇವರ್ಗಿ, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಹೊಸದಾಗಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಜತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಿಸುವ ಕಾಮಗಾರಿಗಳಿಗೆ ₹93 ಕೋಟಿಗೆ ಆಡಳಿತಾತ್ಮಕ ಅನುಮೋದನೆ.

l ಕೋವಿಡ್‌–19 ಮೂರನೇ ಅಲೆ ಸಿದ್ಧತೆಗಾಗಿ ₹317 ಕೋಟಿ ಮೊತ್ತದ ಉಪಕರಣ ಮತ್ತು ಪರಿಕರಗಳನ್ನು ಖರೀದಿಸಲು ಹಾಗೂ ₹52 ಕೋಟಿ ಮೊತ್ತದಲ್ಲಿ ಸಿವಿಲ್‌ ಕಾಮಗಾರಿಗಳಿಗೆ ಘಟನೋತ್ತರ ಅನುಮೋದನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT