ಮಂಗಳವಾರ, ಅಕ್ಟೋಬರ್ 20, 2020
27 °C

ಡ್ರಗ್ಸ್ ಜಾಲ: ಬೆಂಗಳೂರಿನಲ್ಲಿ 5 ಪಬ್‌ಗಳ ಮೇಲೆ ಸಿಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆಯಲ್ಲಿ ಸಿಕ್ಕ ಮಾಹಿತಿ ಆಧರಿಸಿ ನಗರದ ಸಿಸಿಬಿ ಪೊಲೀಸರು, 5 ಪಬ್‌‌ಗಳ ಮೇಲೆ ಶನಿವಾರ ರಾತ್ರಿ ದಾಳಿ ಮಾಡಿದರು.

ಪ್ರಕರಣದಡಿ ಬಂಧಿಸಲಾಗಿರುವ ನಟಿಯರು ಹಾಗೂ ಇತರೆ ಆರೋಪಿಗಳ ವಿಚಾರಣೆ ನಡೆಸಲಾಗಿತ್ತು. ಕೆಲ ಪಬ್‌ಗಳಲ್ಲೂ ಡ್ರಗ್ಸ್ ಪೂರೈಕೆಯಾಗುತ್ತಿದ್ದ ಮಾಹಿತಿ ಆರೋಪಿಗಳಿಂದ ಸಿಸಿಬಿಗೆ ಸಿಕ್ಕಿತ್ತು. 

'ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು 5 ಪಬ್‌ಗಳ ಮೇಲೆ ದಾಳಿ ಮಾಡಲಾಗಿದೆ. ರಾತ್ರಿಯಿಡಿ ಶೋಧ ನಡೆಸಲಾಗಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು