ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ: ಸಚಿವ ಬಿ.ಸಿ.ನಾಗೇಶ್‌

ಮೇ ಮೊದಲನೇ ವಾರ ಎಸ್‌ಎಸ್ಎಲ್‌ಸಿ ಫಲಿತಾಂಶ
Last Updated 11 ಏಪ್ರಿಲ್ 2022, 19:03 IST
ಅಕ್ಷರ ಗಾತ್ರ

ಆಲಮಟ್ಟಿ (ವಿಜಯಪುರ ಜಿಲ್ಲೆ): ‘ಶಾಲೆಗಳಲ್ಲಿ ನೈತಿಕ ಶಿಕ್ಷಣಕ್ಕೆಒತ್ತು ನೀಡುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು‘ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಆಲಮಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು’ ಎಂದು ತಿಳಿಸಿದರು.

‘ಅಬ್ದುಲ್ ಕಲಾಂ ಅವರು ಭಗವದ್ಗೀತೆಯಲ್ಲಿ ಶಕ್ತಿ ಅಡಗಿದೆ ಎಂದು ಹೇಳಿದ್ದಾರೆ.ಭಗವದ್ಗೀತೆ ಧಾರ್ಮಿಕ ಆಚರಣೆಯಲ್ಲ, ಪೂಜಾ ವಿಧಾನವೂ ಅಲ್ಲ, ಅದರ ಸಾರವನ್ನು ಎಲ್ಲ ಧರ್ಮೀಯರೂ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಜೀವನಕ್ಕೆ ಬೇಕಾದ ಮಾರ್ಗದರ್ಶನ ಅದರಲ್ಲಿ ಅಡಗಿದೆ’ ಎಂದರು.

‘ಭಗವದ್ಗೀತೆಯ ಯಾವ ಸಾರವನ್ನು ನೈತಿಕ ವಿಷಯದ ಪಠ್ಯದಲ್ಲಿ ಅಳವಡಿಸಬೇಕೆಂಬುದನ್ನು ಶೀಘ್ರದಲ್ಲಿ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.

‘ಪಠ್ಯದಲ್ಲಿ ಟಿಪ್ಪುವಿನ ಬಗ್ಗೆ ಕೊಟ್ಟಿರುವ ರೀತಿ ನೀತಿ ಸರಿಯಲ್ಲ. ಟಿಪ್ಪುವಿನ ಒಂದು ಮುಖ ಮಾತ್ರ ಪಠ್ಯದಲ್ಲಿ ತೋರಿಸಲಾಗಿದೆ. ಈ ವರ್ಷ ಪಠ್ಯದಿಂದಟಿಪ್ಪು ವಿಷಯ ತೆಗೆದಿಲ್ಲ, ವೋಟ್ ಬ್ಯಾಂಕಿಗಾಗಿ ಕಾಂಗ್ರೆಸ್ ನವರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ’ ನಾಗೇಶ್‌ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT