ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

Last Updated 12 ಜುಲೈ 2021, 16:58 IST
ಅಕ್ಷರ ಗಾತ್ರ

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ಪುರಸ್ಕರಿಸಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

‘ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಈ ತೀರ್ಪಿನಿಂದ ಬಲ ಬಂದಂತಾಗಿದೆ’ ಎಂದು ಹೇಳಿದ್ದಾರೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಷಯದಲ್ಲಿ ಶಿಕ್ಷಣ ಇಲಾಖೆ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್‌ಒಪಿ ಪಾಲನೆಗಳಂಥ ಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಹೈಕೋರ್ಟ್‌ ಒಪ್ಪಿದೆ. ಇದು ಇಡೀ ರಾಷ್ಟ್ರಕ್ಕೆ ಮಾದರಿ ಕ್ರಮ ಎಂದಿರುವ ಕೋರ್ಟ್, ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ’ ಎಂದಿದ್ದಾರೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ವಿಚಾರದಲ್ಲಿ ಕಳೆದ ವರ್ಷ ಕೂಡಾ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು’ ಎಂದೂ ಅವರು ನೆನಪಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT