ಬುಧವಾರ, ಮಾರ್ಚ್ 29, 2023
24 °C

ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ: ಡಿಕೆಶಿ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು (ಕೋಲಾರ): ‘ಚಿನ್ನ, ಚಪ್ಪಲಿ ಕದಿಯೋದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ, ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ಪ್ರಜಾಧ್ವನಿ ಯಾತ್ರೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್‌, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ ಗ್ಯಾಸ್ ಸಿಲಿಂಡರ್‌ ಬೆಲೆ ಜ್ಞಾಪಕ ಮಾಡಿಕೊಂಡು ಮತ ಹಾಕಿ’ ಎಂದು ಹೇಳಿದ್ದರು. ಈಗ ಗ್ಯಾಸ್‌ ಸಿಲಿಂಡರ್‌, ಹಾಲು, ಬೇಳೆ, ಎಣ್ಣೆ ಬೆಲೆ ಹೆಚ್ಚಾಗಿದೆ. ಅವರೆಲ್ಲ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು