ಬೆಂಗಳೂರು: ಎರಡು ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಮುಖಂಡ ಬಾಬೂರಾವ್ ಚಿಂಚನಸೂರು ಅವರು ಬುಧವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಚಿಂಚನಸೂರು ಅವರು ಬಳಿಕ ಬಿಜೆಪಿ ಸೇರಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆಯಯವರನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬಳಿಕ ಬಿಜೆಪಿಯಿಂದ ವಿಧಾನ ಪರಿಷತ್‌ಗೂ ಆಯ್ಕೆಯಾಗಿದ್ದರು. ಸೋಮವಾರ ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಮಾಡಿ ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆ ಅಂಗೀಕಾರವೂ ಆಗಿತ್ತು.
ಕೋಲಿ ಸಮಾಜದ ಪ್ರಮುಖ ನಾಯಕರಾಗಿರುವ ಚಿಂಚನಸೂರ್ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ಹಬ್ಬಿತ್ತು. ಅದನ್ನು ನಿರಾಕರಿಸಿದ್ದ ಅವರು, ‘ನಾನು ಕಾಂಗ್ರೆಸ್ ಸೇರುವುದಿಲ್ಲ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಈ ಚುನಾವಣೆಯಲ್ಲಿ ಸೋಲಿಸುವುದೇ ನನ್ನ ಗುರಿ’ ಎಂದಿದ್ದರು.
ಇತ್ತೀಚೆಗಷ್ಟೇ ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ಕಾಂಗ್ರೆಸ್ ಸೇರಿದ್ದರು. ಈಗ ಚಿಂಚನಸೂರ್ ಕಾಂಗ್ರೆಸ್‌ಗೆ ಮರಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.