ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Election 2023 | ಬಿಜೆಪಿ: ಮಾ.4ರಿಂದ ಫಲಾನುಭವಿಗಳ ಸಮಾವೇಶ

Last Updated 1 ಮಾರ್ಚ್ 2023, 0:00 IST
ಅಕ್ಷರ ಗಾತ್ರ

ಬೆಂಗಳೂರು: ಮಾರ್ಚ್‌ 4ರಿಂದ 20ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮಾರ್ಚ್‌ 4ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ಸಚಿವರಾದ ಎಸ್‌.ಟಿ. ಸೋಮಶೇಖರ್‌, ಕೆ. ಗೋಪಾಲಯ್ಯ, ಆನಂದ್‌ ಸಿಂಗ್ ಮತ್ತು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಅವರೊಂದಿಗೆ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆಗಳ ಅನುಕೂಲವನ್ನು ಲಕ್ಷಾಂತರ ಕುಟುಂಬಗಳು ಪಡೆದಿವೆ. ಪ್ರತಿ ಮನೆಗೂ ನಮ್ಮ ಸರ್ಕಾರದ ಯೋಜನೆಗಳು ತಲುಪಿವೆ. ಸರ್ಕಾರ ಮಾಡಿರುವ ಕೆಲಸಗಳ ಕುರಿತ ಫಲಾನುಭವಿಗಳ ಜತೆ ಮಾಹಿತಿ ಹಂಚಿಕೊಳ್ಳುವ ಉದ್ದೇಶದಿಂದ ಸಮಾವೇಶಗಳನ್ನು ಆಯೋಜಿಸಲಾಗುವುದು’ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳ ಯೋಜನೆಗಳು ಫಲಾನುಭವಿಗಳನ್ನು ಸರಿಯಾಗಿ ತಲುಪಿವೆಯೆ ಎಂಬುದನ್ನು ಖಾತರಿಪಡಿಸಿಕೊಳ್ಳುವುದಕ್ಕಾಗಿ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಸಮಾವೇಶಗಳನ್ನು ನಡೆಸಲಾಗುವುದು. ಕೇಂದ್ರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಮಾವೇಶಗಳು ನಡೆಯಲಿವೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್‌ ಯೋಜನೆ, ಆಯುಷ್ಮಾನ್‌ ಭಾರತ– ಆರೋಗ್ಯ ಕರ್ನಾಟಕ, ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ, ಮತ್ಸ್ಯ ಸಿರಿ ಸೇರಿದಂತೆ ಹಲವು ಮಹತ್ವದ ಯೋಜನೆಗಳು ಈ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಂಡಿವೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಆಗಿರುವ ಬದಲಾವಣೆಗಳನ್ನು ಗುರುತಿಸುವುದು ಈ ಅಭಿಯಾನದ ಮುಖ್ಯ ಗುರಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT