ಬೆಂಗಳೂರು: ಟಿಕೆಟ್ ಯಾರಿಗೆ ನೀಡಬೇಕು ಎಂದು ನಿರ್ಧಾರ ಮಾಡುವುದು ಪಕ್ಷವೇ ಹೊರೆತು ಯಡಿಯೂರಪ್ಪನವರು ಅಲ್ಲ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಎತ್ತಿದೆ.
ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಸಿ.ಟಿ ರವಿ ಅವರ ಹೇಳಿಕೆಯ ವರದಿಯ ಪ್ರತಿಯನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಬಿಜೆಪಿ ಕಾಲ ಕಸದಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದೆ.
‘ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಕಾಲ ಕೆಳಗಿನ ಕಸದಂತೆ ಕಾಣುತ್ತಿದೆ ಬಿಜೆಪಿ. ಟಿಕೆಟ್ ನಿರ್ಧರಿಸುವ ಹಕ್ಕು, ಸ್ವತಂತ್ರ ಯಡಿಯೂರಪ್ಪ ಅವರಿಗಿಲ್ಲ ಎನ್ನುವ ಮೂಲಕ ಬಿಎಸ್‌ವೈ ಮುಕ್ತ ಬಿಜೆಪಿ ಅಭಿಯಾನವನ್ನ ಅಧಿಕೃತಗೊಳಿಸಿದ್ದಾರೆ ಸಿ.ಟಿ ರವಿ. ಲಿಂಗಾಯತರ ಮತಕ್ಕಾಗಿ ಉತ್ಸವ ಮೂರ್ತಿಯಾಗಿದ್ದ ಬಿಎಸ್‌ವೈ ಇಷ್ಟು ಬೇಗ ವಿಸರ್ಜನಾ ಮೂರ್ತಿಯಾದರೆ?‘ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.