ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಗೆ ಕೈ ಮುಗಿತಾರೆ, ಭ್ರಷ್ಟರಿಗೆ ಕರೆ ಮಾಡ್ತಾರೆ: ಮೋದಿ ವಿರುದ್ಧ ಕಾಂಗ್ರೆಸ್

Last Updated 21 ಏಪ್ರಿಲ್ 2023, 10:49 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರೌಡಿಗಳಿಗೆ ಕೈ ಮುಗಿಯುತ್ತಾರೆ ಹಾಗೂ ಭ್ರಷ್ಟಾಚಾರಿಗಳಿಗೆ ಕರೆ ಮಾಡುತ್ತಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಬಿಜೆಪಿ ಹಿರಿಯ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾತನಾಡಿರುವ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಅವರು ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ, ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನ ವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು’ ಎಂದು ಕಿಡಿಕಾರಿದ್ದಾರೆ.

ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? ಶೇ 40ರಷ್ಟು ಕಮಿಷನ್ ಲೂಟಿ ಮಾಡಿದ್ದಕ್ಕಾ?, ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ?, ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

‘ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ 'ಭ್ರಷ್ಟಾಚಾರ'ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮೋದಿ ಅವರೇ, ನಿಮಗೆ ದಮ್ಮು, ತಾಕತ್ತು ಇದ್ದರೆ ಒಂದೇ ಒಂದು ಬಾರಿ ಗುತ್ತಿಗೆದಾರರ ಸಂಘದವರೊಂದಿಗೆ ಮಾತನಾಡಿ. ಒಂದೇ ಒಂದು ಬಾರಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿ, ಒಂದೇ ಒಂದು ಬಾರಿ ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳೊಂದಿಗೆ ಮಾತನಾಡಲು ಸಾಧ್ಯವೇ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT