ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ: ಎಎಪಿಗೆ ಗುಡ್‌ ಬೈ

Last Updated 28 ಫೆಬ್ರವರಿ 2023, 13:40 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಕಂದಾಯ ಸಚಿವ ಆರ್‌.ಅಶೋಕ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.

ತಾವು ಬಿಜೆಪಿ ಸೇರುತ್ತಿರುವುದು ನಿಜ. ನಾಳೆಯೇ ಸೇರ್ಪಡೆಗೊಳ್ಳಲಿದ್ದೇನೆ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್‌ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಆರಂಭದಲ್ಲಿ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪಕ್ಷದಲ್ಲೂ ಸಕ್ರಿಯರಾಗಿದ್ದರು. ಆದರೆ ಕಳೆದ ಒಂದೆರಡು ತಿಂಗಳಿಂದ ಅವರು ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT