ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿಗೆ 140ಕ್ಕೂ ಅಧಿಕ ಸ್ಥಾನ: ಯಡಿಯೂರಪ್ಪ

Last Updated 23 ನವೆಂಬರ್ 2022, 8:17 IST
ಅಕ್ಷರ ಗಾತ್ರ

ದಾವಣಗೆರೆ: ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. 140ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜಗಳೂರು ಬಯಲು ಮಂದಿರದಲ್ಲಿ ಬುಧವಾರ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು.

ಕೆಲವು ಕಾಂಗ್ರೆಸ್‌ ಮುಖಂಡರು ತಿರುಕನ ಕನಸು ಕಾಣುತ್ತಿದ್ದಾರೆ. ಇದು ಕನಸಾಗಿಯೇ ಉಳಿಯಲಿದೆ. ಹಣ, ಹೆಂಡ, ತೋಲ್ಬಳದಿಂದ ಗೆಲ್ಲುವ ಭ್ರಮೆಯಲ್ಲಿ ಕಾಂಗ್ರೆಸ್‌ ಇದೆ. ಇದು ಸಾಧ್ಯವಿಲ್ಲ ಎಂಬುದು ಜನರ ಸ್ಪಂದನೆ ನೋಡುವಾಗ ಗೊತ್ತಾಗಿದೆ ಎಂದು ತಿಳಿಸಿದರು.

ಜಗಳೂರು ಶಾಸಕ ರಾಮಚಂದ್ರ ಅವರು ₹ 3500 ಕೋಟಿಗೂ ಹೆಚ್ಚು ಅನುದಾನ ತಂದಿದ್ದುದಾರೆ. ರಾಜ್ಯದ 224 ಶಾಸಕರಲ್ಲಿ ಮೊದಲಿಗರಾಗಿ ಕೆಲಸ ಮಾಡಿದ್ದಾರೆ.

ಶಿಕಾರಿಪುರದಲ್ಲೂ ನನಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ರಾಮಚಂದ್ರ ಅವರನ್ನು 50 ಸಾವಿರ ಮತಗಳಿಗಿಂತಲೂ ಹೆಚ್ಚು ಅಂತರದಿಂದ ಗೆಲ್ಲಿಸಿಕೊಡಬೇಕು. ಈ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಅದಕ್ಕಾಗಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಮೊಹಲ್ಲಾದಲ್ಲಿ ಹೋಗಿ ಕೆಲಸ ಮಾಡಿ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT