ಹಿರಿಯೂರು (ಚಿತ್ರದುರ್ಗ): ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ವಿಜಯ ಸಂಕಲ್ಪ ಯಾತ್ರೆಗೆ ಸೋಮವಾರ ಹಿರಿಯೂರು ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿದ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಮುಂದಿನ ಮುಖ್ಯಮಂತ್ರಿ ನಾನೇ ಎಂಬುದಾಗಿ ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯೆ ನೀಡಿದರು.
ಪಕ್ಷಾಂತರ ವದಂತಿಗೆ ತೆರೆ:
ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ಬಿ.ಎಸ್.ಯಡಿಯೂರಪ್ಪ ತೆರೆಯಳೆದರು. ಶಾಸಕಿಯ ಹೆಗಲ ಮೇಲೆ ಕೈಹಾಕಿ ‘ಅವರು ನಮ್ಮ ಜೊತೆ ಇದ್ದಾರಲ್ಲಾ’ ಎಂದು ಸುದ್ದಿಗಾರರಿಗೆ ಮರುಪ್ರಶ್ನಿಸಿದರು.
ಶಾಸಕಿ ಪೂರ್ಣಿಮಾ, ‘ಕೆಲ ವಿದ್ಯುನ್ಮಾನ ಮಾಧ್ಯಮಗಳು ವಿನಾ ಕಾರಣ ವದಂತಿ ಸೃಷ್ಟಿಸುತ್ತಿವೆ’ ಎಂದು ಸ್ಪಷ್ಟನೆ ನೀಡಲು ಮುಂದಾದರು. ‘ಹೀಗಾದರೂ ಪ್ರಚಾರ ಸಿಗುತ್ತದೆ ಅಲ್ಲವೇ’ ಎಂದು ಯಡಿಯೂರಪ್ಪ ತಿಳಿಹಾಸ್ಯದ ಮೂಲಕ ಗೊಂದಲಕ್ಕೆ ತೆರೆಯಳೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.