ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ ನನಗೆ ಅಗ್ನಿಪರೀಕ್ಷೆ: ರೇವಣ್ಣ

Last Updated 30 ಮಾರ್ಚ್ 2023, 4:05 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲೆಯಲ್ಲಿ 25 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಜಿಲ್ಲೆ ಏನು ಎಂಬುದು ನನಗೆ ಗೊತ್ತಿದೆ. ನಮ್ಮ ಮುಖಂಡರ ಜೊತೆಗೆ ಕುಳಿತು ಮಾತನಾಡುತ್ತೇನೆ. ಇದರಲ್ಲಿ ಯಾವುದೇ ದಾಕ್ಷಿಣ್ಯ ಇಲ್ಲ. ಹೆದರಿಕೊಂಡು ಓಡಿ ಹೋಗಲ್ಲ. ಜಿಲ್ಲೆಯಲ್ಲಿ ಈ ಬಾರಿ ನನಗೆ ಅಗ್ನಿಪರೀಕ್ಷೆ ನಡೆಯಲಿದೆ’ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ರೇವಣ್ಣ ಜಿಲ್ಲೆಗೆ ದುಡಿದಿದ್ದಾನೆ ಎಂದರೆ ಜಿಲ್ಲೆಯ ಜನ ನನ್ನ ಕೈಹಿಡಿಯಲಿ. ಇಲ್ಲವೆಂದರೆ, ಅವರೇ ತೀರ್ಮಾನಿಸಲಿ. ಕಾರ್ಯಕರ್ತರೆಲ್ಲ ಒಟ್ಟಾಗಿದ್ದೇವೆ. ಹಾಸನದಲ್ಲಿ ಸಮರ್ಥ ನಾಯಕರಿಲ್ಲ ಎಂದು ತಿಳಿದುಕೊಳ್ಳಬೇಡಿ’ ಎಂದರು.

ಹಾಸನ ಟಿಕೆಟ್‌ ಆಕಾಂಕ್ಷಿ ಎಚ್.ಪಿ. ಸ್ವರೂಪ್‌ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕುರಿತಂತೆ, ‘ಅವರು ಯಾರೆಂದು ಗೊತ್ತಿಲ್ಲ. ಹಾಸನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ
ನನ್ನು ನಿಲ್ಲಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಸಾಮಾನ್ಯ ಕಾರ್ಯಕರ್ತ ಯಾರು ಎಂದು ನೋಡೋಣ’ ಎಂದಷ್ಟೇ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT