ಭಾನುವಾರ, ಏಪ್ರಿಲ್ 2, 2023
23 °C

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ.‌ ಅದನ್ನು‌ ಈಡೇರಿಸುತ್ತೇವೆ. ಒಂದು‌ ವೇಳೆ‌ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ‌ ಹೇಳಿದರು.

ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ‌’ ಯಾತ್ರೆಯಲ್ಲಿ‌ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ  ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕನಿಷ್ಠ‌ 5 ಸ್ಥಾನಗಳನ್ನು‌ ಗೆಲ್ಲಲೇಬೇಕು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು