ಭಾನುವಾರ, ಆಗಸ್ಟ್ 14, 2022
26 °C

ಡಿ.8ರ ಭಾರತ್‌ ಬಂದ್‌ಗೆ ರಾಜ್ಯ ರೈತ ಸಂಘಗಳ ಬೆಂಬಲ

ಪಿಟಿಐ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರವ್ಯಾಪಿ ಮುಷ್ಕರಕ್ಕೆ ವಿವಿಧ ರೈತ ಸಂಘಟನೆಗಳು ಡಿಸೆಂಬರ್‌ 8ರಂದು ನೀಡಿರುವ ‘ಭಾರತ್‌ ಬಂದ್‌’ ಕರೆಗೆ ಬೆಂಬಲಿಸುವುದಾಗಿ ಭಾನುವಾರ ಕರ್ನಾಟಕ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.9 ರಂದು ವಿಧಾನಸಭೆ ಅಧಿವೇಶನ ನಡೆಯಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ’ ಎಂದರು.

ಹೊಸ ಕೃಷಿ ಕಾನೂನುಗಳನ್ನು ಜಾರಿಗೊಳಿಸುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದ್ದರಿಂದ ಪ್ರತಿ ತಾಲ್ಲೂಕು ಮಟ್ಟದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಪ್ರತಿಭಟನೆಗೆ ಸಾರ್ವಜನಿಕರಿಂದ ಬೆಂಬಲ ದೊರೆಯಲಿದೆ ಎಂದು ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ 11 ದಿನಗಳಿಂದ ರೈತರು (ದೆಹಲಿ) ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ನಾವು ಕೂಡ ಬೆಂಬಲ ಸೂಚಿಸಿದ್ದೇವೆ ಎಂದು ತಿಳಿಸಿದರು.

ಭೂಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್‌, ಹರಿಯಾಣ ಮತ್ತು ದೇಶದ ಇತರ ಭಾಗಗಳಿಂದ ಸಾವಿರಾರು ರೈತರು ಕಳೆದ 10 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು