ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಕರ್ನಾಟಕ ಧನ ವಿನಿಯೋಗ ಮಸೂದೆಗೆ ಅಂಗೀಕಾರ

ವಿಧಾನಮಂಡಲ ಅಧಿವೇಶನ
Last Updated 24 ಡಿಸೆಂಬರ್ 2021, 19:32 IST
ಅಕ್ಷರ ಗಾತ್ರ

ಬೆಳಗಾವಿ: ₹ 3,577 ಕೋಟಿ ಮೊತ್ತದ ಎರಡನೇ ಪೂರಕ ಅಂದಾಜಿನ‌ 'ಕರ್ನಾಟಕ ಧನ ವಿನಿಯೋಗ ಮಸೂದೆ'ಯನ್ನು ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಶುಕ್ರವಾರ ಅಂಗೀಕರಿಸಲಾಯಿತು.

ಮಸೂದೆ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪ್ರಸಕ್ತ ಸಾಲಿನಲ್ಲಿ ಗುರಿ ಮೀರಿ ತೆರಿಗೆ ಸಂಗ್ರಹವಾಗುವ ನಿರೀಕ್ಷೆಯಿದೆ. ನವೆಂಬರ್‌ ಅಂತ್ಯದವರೆಗೆ ಶೇ 67ರಷ್ಟು ತೆರಿಗೆ ಸಂಗ್ರಹವಾಗಿದೆ’ ಎಂದರು.

‘ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ನಿರೀಕ್ಷೆಯಿದೆ. ಆದರೆ, ಕೋವಿಡ್‌ನಿಂದ ಎರಡು ವರ್ಷ ಹದಗೆಟ್ಟಿರುವ ಹಣಕಾಸು ಸ್ಥಿತಿ ಸುಧಾರಣೆಯಾಗಲು ಇನ್ನಷ್ಟು ಸಮಯ ಬೇಕಾಗಿದೆ’ ಎಂದರು.

‘ನಾನು ಸಮಸ್ಯೆಯ ಭಾಗವಾಗಲು ಇಚ್ಚಿಸುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ. ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಹಾಕಿ ಉಳಿತಾಯಕ್ಕೆ ಆದ್ಯತೆ ನೀಡುತ್ತೇನೆ’ ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT