ಭಾನುವಾರ, ಸೆಪ್ಟೆಂಬರ್ 27, 2020
27 °C
ಲೋಪ ಸರಿಪಡಿಸಿಕೊಳ್ಳಲು ತಿಂಗಳ ಗಡುವು ನೀಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಅರಣ್ಯ ಅಭಿವೃದ್ಧಿ ನಿಗಮದಿಂದ ಕನ್ನಡ ಕಡೆಗಣನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟಿ.ಎಸ್.ನಾಗಾಭರಣ

ಬೆಂಗಳೂರು: ‘ಜಾಲತಾಣ ಸೇರಿದಂತೆ ಆಡಳಿತಾತ್ಮಕ ವ್ಯವಹಾರಗಳಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ತಿಂಗಳೊಳಗೆ ಜಾರಿಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ಅವರಿಗೆ ಸೂಚಿಸಿದರು.

ಆನ್‌ಲೈನ್ ವಿಡಿಯೋ ಸಂವಾದದ ಮೂಲಕ ಗುರುವಾರ ಅವರು ಕನ್ನಡ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಜಾಲತಾಣ ಸೇರಿದಂತೆ ವಿವಿಧೆಡೆ ಆಂಗ್ಲ ಭಾಷೆಯಲ್ಲಿ ಮಾಹಿತಿಗಳನ್ನು ಒದಗಿಸುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಕೂಡಲೇ ಲೋಪದೋಷಗಳನ್ನು ಸರಿಪಡಿಸಿಕೊಂಡು, ಎಲ್ಲ ಮಾಹಿತಿಗಳು ಕನ್ನಡದಲ್ಲಿ ಒದಗಿಸಲು ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.  

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು