ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 

Last Updated 7 ಅಕ್ಟೋಬರ್ 2022, 12:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರಶೇಕಡಾ3.75 ರಷ್ಟುಹೆಚ್ಚಳ ಮಾಡಿದೆ.

‘ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟರ್‌ ಮೂಲಕ ಶುಕ್ರವಾರ ಮಾಹಿತಿ ನೀಡಿದೆ.

ಈ ನಿರ್ಧಾರದಿಂದಾಗಿ ಸರ್ಕಾರದ ಮೇಲೆ ₹1,282.72 ಕೋಟಿ ಹೊರೆ ಬೀಳಲಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮತ್ತು ಡಿಆರ್ ಅನ್ನುಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆಅನುಮೋದನೆ ನೀಡಿತ್ತು. ಅದರ ಬೆನ್ನಿಗೇ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT