ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಕ್ಲಿನಿಕ್‌: ಲಾಂಛನಗಳಿಗೆ ಆರೋಗ್ಯ ಇಲಾಖೆ ಆಹ್ವಾನ

Last Updated 5 ಆಗಸ್ಟ್ 2022, 16:29 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಪ್ರಾರಂಭಿಸುತ್ತಿರುವ ‘ನಮ್ಮ ಕ್ಲಿನಿಕ್‌’ಗಳಿಗೆ ಆರೋಗ್ಯ ಇಲಾಖೆಯುಲಾಂಛನಗಳನ್ನು (ಲೋಗೊ) ಆಹ್ವಾನಿಸಿದ್ದು, ‘ಆಯ್ಕೆಯಾದ ಲಾಂಛನದ ವಿನ್ಯಾಸಕಾರರಿಗೆ ಮುಖ್ಯಮಂತ್ರಿ ಮತ್ತು ಸಚಿವರಿಂದ ವಿಶೇಷ ಗೌರವ ಸಿಗಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಸ್ಪರ್ಧೆಗೆ ಶುಕ್ರವಾರ ಚಾಲನೆ ದೊರೆತಿದೆ. ಇದೇ 15ರವರೆಗೆ ಲಾಂಛನ ಕಳುಹಿಸಬಹುದು.ಸರ್ಕಾರವು ‘ನಮ್ಮ ಕ್ಲಿನಿಕ್‌’ಗಳಿಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲಾಂಛನವನ್ನು ವಿನ್ಯಾಸ ಮಾಡಲು ರಾಜ್ಯದ ಜನರಿಗೆ ಅವಕಾಶವಿದೆ.ರಾಜ್ಯದ 436 ಕಡೆಗಳಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಗೆ ಹೊಸ ಸ್ಪರ್ಶವನ್ನು ತಂದು ಕೊಡಲಿದೆ ಎಂದು ಇಲಾಖೆ ಹೇಳಿದೆ.

ಸಿದ್ಧಪಡಿಸಿದ ಲಾಂಛನಗಳನ್ನು logo4nammaclinic@gmail.comಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT