ಗುರುವಾರ , ಮೇ 6, 2021
26 °C

ಚಾಮರಾಜನಗರ ದುರಂತ: ತನಿಖೆಗೆ ಸರ್ಕಾರ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 23 ಜನರ ಸಾವಿಗೆ ಕಾರಣವಾದ ಹಿನ್ನೆಲೆಯನ್ನು ಪತ್ತೆ ಮಾಡಿ ಸರ್ಕಾರ ವರದಿ ಸಲ್ಲಿಸಲು ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಮೂರು ದಿನಗಳೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಮ್ಲಜನಕ ಸಿಲಿಂಡರ್ ಖಾಲಿಯಾಗಿ ಆತಂಕ ಸೃಷ್ಟಿಯಾಗಿತ್ತು. ಆಮ್ಲಜನಕ ಸಿಲಿಂಡರ್ ಖಾಲಿಯಾದ ಪರಿಣಾಮ 24 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, 12 ಜನರು ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸ್ಥಳೀಯರು ಇದನ್ನು ನಿರಾಕರಿಸುತ್ತಿದ್ದಾರೆ. ಆಸ್ಪತ್ರೆ, ಜಿಲ್ಲಾಡಳಿತ ನಿಖರ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಆರೋಪಿಸಿದ್ದಾರೆ.  

ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆವರೆಗೆ 24 ಜನರು ಮೃತಪಟ್ಟಿದ್ದಾರೆ. ಎಲ್ಲರೂ ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಚಾಮರಾಜನಗರ ಡಿಸಿ ಡಾ.ಎಂ‌.ಆರ್. ರವಿ ಹೇಳಿದ್ದಾರೆ.

ಕೋವಿಡ್‌ಯೇತರ ರೋಗಿಗಳಿಗೂ ಆಮ್ಲಜನಕ ಕೊರತೆ ಉಂಟಾಗಿದ್ದು, ಜೀವ ಹಾನಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ.. ಚಾಮರಾಜನಗರ: ಆಮ್ಲಜನಕ ಕೊರತೆಯಿಂದ 12 ಸಾವು– ಜಿಲ್ಲಾಸ್ಪತ್ರೆ ಮಾಹಿತಿ
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು