ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷ ಸಂಭ್ರಮ: ಪಬ್ ಇರುತ್ತೆ, ಡಿಜೆ-ಡ್ಯಾನ್ಸ್ ಇಲ್ಲ, ಆಲಿಂಗನಕ್ಕೆ ನಿಷೇಧ

Last Updated 18 ಡಿಸೆಂಬರ್ 2020, 3:12 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಆದರೆ ಕೋವಿಡ್ 19 ಸಾಂಕ್ರಾಮಿಕ ರೋಗ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಮುನ್ನಚ್ಚೆರಿಕಾ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡಿದ್ದು, ಈ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಕಂಡುಬಂದು ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ಮಸ್ ಹಬ್ಬ ಹಾಗೂ ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ, ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆಯಿದೆ.

ಈ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟ (ಪಾರ್ಟಿ)ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರತಕ್ಕಂತ ಸ್ಥಳಗಳಲ್ಲಿ ಆಯೋಜಿಸುವುದು ನಿಷೇಧಿಸಲಾಗಿದೆ. ಅಲ್ಲದೇ, ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಹೊರಡಿಸಿರುವ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಈ ಮಾರ್ಗಸೂಚಿಗಳು ಡಿಸೆಂಬರ್ 20ರಿಂದ 2 ಜನವರಿ ವರೆಗೆ ಚಾಲ್ತಿಯಲ್ಲಿರುತ್ತದೆ.

ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆ ಸಂಬಂಧವಾಗಿ ಮಾರ್ಗಸೂಚಿಗಳು:
1. ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು/ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
2. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
3. ಡಿಸೆಂಬರ್ 30ರಿಂದ ಹೊಸವರ್ಷ ಜನವರಿ 2ರ ವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡ್ಯಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ ಇತ್ಯಾದಿ ನಿಷೇಧಿಸಿದೆ. ಆದರೆ, ಕ್ಲಬ್/ಪಬ್/ರೆಸ್ಟೋರೆಂಟಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.
4. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಲ್ಲಿ ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.
5. ಆಯ್ದ ರಸ್ತೆ ಸ್ಥಳಳಿಗೆ ಸಂಬಂಧಿಸಿದಂತೆ, ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು.
6. ಬಹು ಮುಖ್ಯವಾಗಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‌ಗಳು/ಮಾಲ್‌ಗಳು/ಪಬ್/ರೆಸ್ಟೋರೆಂಟ್‌ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು.
7. ಹೋಟೆಲ್‌ಗಳು/ಮಾಲ್‌ಗಳು/ಪಬ್/ರೆಸ್ಟೋರೆಂಟ್‌ಗಳು ಹಾಗೂ ಅಂತಹ ಸ್ಥಳ/ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರು ಜಾಗ್ರತೆ ವಹಿಸವುದು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ/ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು (ಮುಂಗಡ ಬುಕ್ಕಿಂಗ್) ವ್ಯವಸ್ಥೆಯನ್ನು ಕಲ್ಪಿಸುವುದು.
8. ಪ್ರಾಂಗಣದಲ್ಲಿ, ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಛಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು.
9. ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚ ತಕ್ಕದ್ದು.

*ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗುವ ಇತರೆ ಕಾನೂನು ಉಪಬಂಧಗಳ ಮೇಲೆ ಕ್ರಮ ಜರುಗಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT