ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್‌ ವಾಸ್ತವ್ಯಕ್ಕೆ ಶೇ 50ರ ಮಿತಿ ಇಲ್ಲ: ಪರಿಷ್ಕೃತ ಆದೇಶ

Last Updated 28 ಡಿಸೆಂಬರ್ 2021, 19:49 IST
ಅಕ್ಷರ ಗಾತ್ರ

ಬೆಂಗಳೂರು: ಹೋಟೆಲ್‌ ಕೊಠಡಿಗಳಲ್ಲಿ ವಾಸ್ತವ್ಯ ಮತ್ತು ಆತಿಥ್ಯಕ್ಕೆ ಶೇ 50ರ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ತಿಳಿಸಿದ್ದಾರೆ.

ಶುಕ್ರವಾರದಿಂದ ಜನವರಿ 2ರವರೆಗೆ ಹೋಟೆಲ್‌, ರೆಸ್ಟೋರೆಂಟ್‌, ಪಬ್‌ ಮತ್ತು ಕ್ಲಬ್‌ಗಳಲ್ಲಿ ಸಾಮರ್ಥ್ಯದ ಶೇಕಡ 50ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂಬ ನಿರ್ಬಂಧ ಇದೆ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ ಹೊರಡಿಸಿರುವ ಆದೇಶದ ಕುರಿತು ಸ್ಪಷ್ಟನೆ ನೀಡಿ ಮಂಗಳವಾರ ಪರಿಷ್ಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ.
‘ಶೇ 50ರ ಮಿತಿಯು ಹೋಟೆಲ್‌
ಗಳಲ್ಲಿ ಗ್ರಾಹಕರಿಗೆ ಆಹಾರ, ಪಾನೀಯ ಪೂರೈಸುವ ಸ್ಥಳಗಳಿಗೆ ಮಾತ್ರ ಅನ್ವಯ. ಕೊಠಡಿಗಳಲ್ಲಿ ವಾಸ್ತವ್ಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ’, ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT