ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಪರ್ಸೆಂಟ್‌ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿಯಾಗಿ ವ್ಯಾಪಿಸಿದೆ: ಕಾಂಗ್ರೆಸ್‌

Last Updated 7 ಆಗಸ್ಟ್ 2022, 9:16 IST
ಅಕ್ಷರ ಗಾತ್ರ

ಬೆಂಗಳೂರು: ಜಾತಿವಾರು ನಿಗಮಗಳಲ್ಲಿ ಹೆಚ್ಚಿದ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

‘ಬಡವರ ಹಣ: ಬಲಾಢ್ಯರ ಕಲ್ಯಾಣ’ ಎಂಬ ‘ಪ್ರಜಾವಾಣಿ’ ಒಳನೋಟ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

‘ಬಿಜೆಪಿ ಸರ್ಕಾರದಲ್ಲಿ ಶೇ 40 ಕಮಿಷನ್ ಭ್ರಷ್ಟಾಚಾರದ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿಯಾಗಿ ವ್ಯಾಪಿಸಿದೆ’ ಎಂದು ಕೆಪಿಸಿಸಿ ಹರಿಹಾಯ್ದಿದೆ.

‘ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ, ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.

ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆಯಾಗಿದೆ.ಗಂಗಾ ಕಲ್ಯಾಣದಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.ಇಲಾಖಾ ತನಿಖೆಯಲ್ಲಿ ಮೇಲ್ನೋಟದಲ್ಲೇ ಹಗರಣ ಸಾಬೀತಾಗಿದೆ.ಇದನ್ನುಉನ್ನತ ತನಿಖೆಗೆ ವಹಿಸದೆ ಸರ್ಕಾರ ಹಿಂದೇಟು ಹಾಕುತ್ತಾ ದಲಿತರಿಗೆ ಅನ್ಯಾಯವೆಸಗುತ್ತಿದೆ’ ಎಂದು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT