ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ, ಒಪಿಎಸ್‌ಗೆ ಮಾರ್ಚ್‌ 1ರ ಗಡುವು -ಸರ್ಕಾರಿ ನೌಕರರ ಎಚ್ಚರಿಕೆ

ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸರ್ಕಾರಿ ನೌಕರರ ಎಚ್ಚರಿಕೆ
Last Updated 21 ಫೆಬ್ರುವರಿ 2023, 23:00 IST
ಅಕ್ಷರ ಗಾತ್ರ

ಬೆಂಗಳೂರು: 2022ರ ಜುಲೈ ನಿಂದಲೇ ಶೇ 40ರಷ್ಟು ಫಿಟ್‌ಮೆಂಟ್ ನೀಡಬೇಕು, ಎನ್‌ಪಿಎಸ್‌ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮಾರ್ಚ್‌ 1ರೊಳಗೆ ಜಾರಿ ಮಾಡಬೇಕು. ಈ ಎರಡೂ ಬೇಡಿಕೆ ಈಡೇರಿಸದೇ ಇದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಂಘದ ತುರ್ತು ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು, ಫಿಟ್‌ಮೆಂಟ್ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಅನ್ಯ ರಾಜ್ಯಗಳಲ್ಲಿ ಜಾರಿ ಮಾಡಿದಂತೆ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೆ ತರಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.

ಈ ಎರಡೂ ಬೇಡಿಕೆ ಈಡೇರಿಸಲು ಏಳು ದಿನಗಳ ಸಮಯ ಇದೆ. ಬೇಡಿಕೆ ಈಡೇರದಿದ್ದರೆ ಎಲ್ಲ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳ ಹಾಗೂ ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಕೆಲಸಕ್ಕೆ ಗೈರಾಗಲಿದ್ದಾರೆ ಎಂದು ಸಂಘ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT