ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ ಇಂದು

Last Updated 20 ಫೆಬ್ರುವರಿ 2023, 22:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ಜಾರಿ ಮತ್ತು ನೂತನ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾವ ಮಾಡದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತುಸಭೆ ಮಂಗಳವಾರ ನಡೆಯಲಿದೆ.

ಈ ಬಗ್ಗೆ ಸೋಮವಾರ ಸಮಾನಮನಸ್ಕ ವೃಂದಗಳ ನೌಕರರ ಸಂಘಗಳ ಪದಾಧಿಕಾರಿಗಳು ಸಮಾಲೋಚನಾ ಸಭೆ ನಡೆಸಿದರು. ನೌಕರರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಈ ನೌಕರರ ಸಂಘಗಳು ನಿರ್ಧರಿಸಿವೆ.

ಸೋಮವಾರ ನಡೆದ ಸಭೆಯಲ್ಲಿ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ, ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ಸಂಘ, ಸರ್ಕಾರದ ಸಚಿವಾಲಯ ನೌಕರರ ಸಂಘ, ಅರಣ್ಯ ಇಲಾಖೆ ನೌಕರರ ಸಂಘ, ಸರ್ವೇ ಇಲಾಖೆ ನೌಕರರ ಸಂಘ, ವಿಧಾನಸಭಾ ಸಚಿವಾಲಯ ನೌಕರರ ಸಂಘ, ವಿಧಾನ ಪರಿಷತ್ ಸಚಿವಾಲಯ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT