ಬೆಳಗಾವಿ: ವಿಧಾನಸಭೆ ಚುನಾವಣೆಗೆ ₹300 ಕೋಟಿ, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಪರಿಹಾರ ಒದಗಿಸಲು ₹758.19 ಕೋಟಿ ಸೇರಿದಂತೆ ಹೆಚ್ಚುವರಿಯಾಗಿ ₹8 ಸಾವಿರ ಕೋಟಿ ವೆಚ್ಚ ಮಾಡಲು ಅನುಮೋದನೆ ಪಡೆಯಲು ಎರಡನೇ ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಯಿತು.
ದೇವಸ್ಥಾನ, ಸಮುದಾಯಗಳಿಗೆ ನೀಡಲಾಗುತ್ತಿರುವ ಅನುದಾನವನ್ನು ಪೂರಕ ಅಂದಾಜಿನಲ್ಲಿ ಒದಗಿಸಿಕೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ಅಧಿಕೃತ ಕಾರ್ಯಕ್ರಮಗಳಿಗೆ ಬಾಡಿಗೆ ಆಧಾರದ ಮೇಲೆ ಹೆಲಿಕಾಪ್ಟರ್/ ಏರ್ ಕ್ರಾಫ್ಟ್ ಬಿಲ್‌ಗಳನ್ನು ಪಾವತಿಸಲು ₹6 ಕೋಟಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಚರ್ಮಗಂಟು ರೋಗದಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ಪರಿಹಾರ ವಿತರಿಸಲು ₹30 ಕೋಟಿ ಹೆಚ್ಚುವರಿಯಾಗಿ ಕೊಡಲಾಗಿದೆ.
lಅತಿವೃಷ್ಟಿಯಿಂದ ಮೂಲಸೌಕರ್ಯಕ್ಕೆ ಆಗಿರುವ ಹಾನಿ ಸರಿಪಡಿಸಲು ₹124.50 ಕೋಟಿ ಹಾಗೂ ಕೊಡಗು ಜಿಲ್ಲೆಯಲ್ಲಿ ಮೂಲಸೌಕರ್ಯಕ್ಕೆ ಆಗಿರುವ ಸರಿಪಡಿಸಲು ನಡೆಸಿದ ಕಾಮಗಾರಿಗಳ ಬಾಕಿ ಬಿಲ್‌ಗಳ ಪಾವತಿಗೆ ಬೇಕಾದ ₹13.58 ಕೋಟಿ ಸೇರಿದಂತೆ ಒಟ್ಟು ₹638.08 ಕೋಟಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.