ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬಳಿಕ ರಾಜ್ಯದ ಜನತೆಗೆ ಕರೆಂಟ್ ಶಾಕ್: ಎಚ್‌ಡಿಕೆ

Last Updated 4 ಏಪ್ರಿಲ್ 2022, 14:18 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದನಾಯಕ ಎಚ್‌.ಡಿ. ಕುಮಾರಸ್ವಾಮಿ ಸೋಮವಾರವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ,ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದು ಹೇಳಿದರು.

ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ ಎಂದು ಟ್ವೀಟ್ ಮಾಡಿದರು.

ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT