ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸುವ ಕುರಿತಂತೆ UGC ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ರಾಜ್ಯದಲ್ಲಿ ಮಾರ್ಗಸೂಚಿಗಳನ್ನು ಪರಿಶೀಲಿಸಿ 2020-21 ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ನವೆಂಬರ್ 17 ರಂದು ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶೈಕ್ಷಣಿಕ ಸಂಸ್ಥೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಣಿತರ ಹಾಗೂ ಸಂಬಂಧಪಟ್ಟ ಎಲ್ಲಾ ಪಾಲುದಾರರೊಂದಿಗೆ ಚರ್ಚಿಸಿ ಈ SOP ಜಾರಿಗೊಳಿಸಲಾಗಿದೆ.ಎಲ್ಲಾ ವಿಶ್ವವಿದ್ಯಾಲಯಗಳು,ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕರಿಸಬೇಕಾಗಿ ನನ್ನ ಕೋರಿಕೆ.