ಬುಧವಾರ, ಜನವರಿ 27, 2021
22 °C

ಜನವರಿ 13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ: ಬಿ.ಎಸ್‌. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಇದೇ 13 ಅಥವಾ 14 ರಂದು  ಸಂಪುಟ ವಿಸ್ತರಣೆ ಮಾಡಲಾಗುವುದು' ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 

ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ಪುಣ್ಯ ತಿಥಿ ಅಂಗವಾಗಿ ಸೋಮವಾರ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ ಬಳಿಕ ಅವರು‌ ಸುದ್ದಿಗಾರರ ಜೊತೆ ಮಾತನಾಡಿದರು. 

'ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಅವರಿಗೆ ಅನುಕೂಲಕರ ದಿನ‌ ನೋಡಿಕೊಂಡು ದಿನ ಅಂತಿಗೊಳಿಸುತ್ತೇನೆ' ಎಂದು ಯಡಿಯೂರಪ್ಪ ಹೇಳಿದರು. 

ಸಂಪುಟ ವಿಸ್ತರಣೆಯೇ ಪುನರ್ ರಚನೆಯೇ ಎಂಬ ಪ್ರಶ್ನೆಗೆ, 'ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೋಡೋಣ ಎರಡೂ ಗೊತ್ತಾಗುತ್ತದೆ' ಎಂದಷ್ಟೆ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು