ಬುಧವಾರ, ಅಕ್ಟೋಬರ್ 21, 2020
24 °C

ಮಾಸ್ಕ್ ದಂಡ ಪ್ರಮಾಣವನ್ನು ಒಂದು ಸಾವಿರದಿಂದ ₹ 250ಕ್ಕೆ ಇಳಿಸಿದ ಸರ್ಕಾರ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವವರಿಗೆ ಭಾರಿ ದಂಡ ವಿಧಿಸುವುದಾಗಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ ದಂಡದ ಪ್ರಮಾಣವನ್ನು ಇಳಿಸಿದೆ. 

ಮಾಸ್ಕ್ ಧರಿಸದವರಿಗೆ ವಿಧಿಸಿದ್ದ ದಂಡ ಪ್ರಮಾಣವನ್ನು ಒಂದು ಸಾವಿರದಿಂದ ₹  250ಕ್ಕೆ ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಗರ ಪ್ರದೇಶಗಳಲ್ಲಿ ₹ 250 ಹಾಗೂ ಗ್ರಾಮೀಣ ಭಾಗದಲ್ಲಿ ₹ 100 ದಂಡ ವಿಧಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಆದೇಶದಲ್ಲಿ ಸರ್ಕಾರವು ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ಮತ್ತು ಗ್ರಾಮೀಣ ಪ್ರದೇಶದಲ್ಲಿ 100ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು