ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

Last Updated 19 ಜುಲೈ 2022, 5:43 IST
ಅಕ್ಷರ ಗಾತ್ರ

ಬೆಂಗಳೂರು: ಸ್ಥಳ ನಿರೀಕ್ಷಣೆಯಲ್ಲಿದ್ದ ಕೆ.ಶ್ರೀನಿವಾಸ್‌ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಸೋಮವಾರ ವರ್ಗಾವಣೆ ಮಾಡಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್‌ ಅವರನ್ನು ಲಂಚ ಪ್ರಕರಣದಲ್ಲಿ ಜುಲೈ 1ರಂದು ಅಮಾನತುಗೊಳಿಸಿದ್ದರಾಜ್ಯ ಸರ್ಕಾರ, ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ ಅವರಿಗೆ ಜಿಲ್ಲಾಧಿಕಾರಿ ಹುದ್ದೆಯನ್ನು ಪ್ರಭಾರವಾಗಿ ನೀಡಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಾದ (ಆರ್ಥಿಕ) ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಅವರನ್ನು ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಮಹಾಂತೇಶ ಬೀಳಗಿ ಅವರಿಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ನೀಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿ ಕಾರಿಯಾಗಿ ಕರ್ನಾಟಕ ವೈದ್ಯ ಕೀಯ ಪೂರೈಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್‌.ಎಂ. ನಾಗರಾಜ್‌, ಕೊಪ್ಪಳ ಜಿಲ್ಲಾಧಿಕಾರಿಯಾಗಿ ಎಂ. ಸುಂದರೇಶಬಾಬು ಅವರನ್ನು ವರ್ಗಾಯಿಸಲಾಗಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶ ಬಾಬು ಅವರನ್ನು ಜುಲೈ 11ರ ಆದೇಶ ದಲ್ಲಿ ಬೆಂಗ ಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿತ್ತು.

ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಪರಿ ಹಾರ, ಪುನರ್ವಸತಿ ಮತ್ತು ಭೂ ಸ್ವಾಧೀನದ ಪ್ರಧಾನ ವ್ಯವಸ್ಥಾಪಕರಾಗಿ ರಾಹುಲ್‌ ರತ್ನಂ ಪಾಂಡೆ ಅವರನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT