ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಡಿ. 22, 27ರಂದು ಗ್ರಾಮ ಪಂಚಾಯಿತಿ ಚುನಾವಣೆ

Last Updated 30 ನವೆಂಬರ್ 2020, 7:19 IST
ಅಕ್ಷರ ಗಾತ್ರ

ಬೆಂಗಳೂರು: ಅವಧಿ ಮುಗಿದಿರುವ 5,761 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ನಡೆಸಲು ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

‘ಮೊದಲ ಹಂತದ ಮತದಾನ ಡಿ.22 ಮತ್ತು ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಮೊದಲ ಮತ್ತು ಎರಡನೇ ಹಂತದ ಚುನಾವಣೆಗಳು ನಡೆಯಲಿದೆ. ಶೇ 50ರಷ್ಟು ತಾಲ್ಲೂಕುಗಳಲ್ಲಿ ಮೊದಲ ಹಂತ ಉಳಿದ ತಾಲ್ಲೂಕುಗಳಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ಉದಾಹರಣೆಗೆ ಒಂದು ಜಿಲ್ಲೆಯಲ್ಲಿ 6 ತಾಲ್ಲೂಕುಗಳಿದ್ದರೆ ಮೊದಲ ಹಂತದಲ್ಲಿ ಮೂರು ತಾಲ್ಲೂಕು ಮತ್ತು ಎರಡನೇ ಹಂತದಲ್ಲಿ ಮೂರು ತಾಲ್ಲೂಕಗಳಲ್ಲಿ ಚುನಾವಣೆ ನಡೆಯಲಿದೆ’ ಎಂದು ರಾಜ್ಯ ಚುನಾವಣಾ ಆಯುಕ್ತ ಬಿ.ಬಸವರಾಜ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎರಡೂ ಹಂತದ ಮತ ಎಣಿಕೆ ಒಂದೇ ದಿನ ಡಿ.30ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.7ರಿಂದ ಮತ್ತು ಎರಡನೇ ಹಂತದ ಮತದಾನಕ್ಕೆ ಡಿ.11ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಡಿ,11 ಮತ್ತು 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.12 ಮತ್ತು 17ರಂದು ನಾಮಪತ್ರಗಳ ಪರಿಶೀಲನೆ ನಡೆಲಿದೆ. ನಾಮಪತ್ರ ವಾಪಸ್ ಪಡೆಯಲು ಕ್ರಮವಾಗಿ ಡಿ.14 ಮತ್ತು 19ರಂದು ಕೊನೆಯ ದಿನವಾಗಿವೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.24 ಮತ್ತು 29ರಂದು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೀದರ್‌ ಜಿಲ್ಲೆಯಲ್ಲಿ ಮಾತ್ರ ಮತಯಂತ್ರ(ಇವಿಎಂ) ಬಳಕೆ ಮಾಡಲಾಗುತ್ತಿದ್ದು, ಉಳಿದೆಡೆ ಮತಪತ್ರಗಳ ಮೂಲವೇ ಚುನಾವಣೆ ನಡೆಯಲಿವೆ. ಮತದಾನದ ವೇಳೆ ಕೋವಿಡ್ ಹರಡದಂತೆ ಮುನ್ನೆಚ್ಚಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರು ಮತದಾನ ಮಾಡಲು ಕೊನೆಯ 1 ಗಂಟೆ ಅವಕಾಶ ನೀಡಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT