ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ನೇಮಕ: ಆನ್‌ಲೈನ್ ಕೌನ್ಸೆಲಿಂಗ್ ಜನವರಿ 27ರಿಂದ

Last Updated 26 ಜನವರಿ 2022, 12:44 IST
ಅಕ್ಷರ ಗಾತ್ರ

ಬೆಂಗಳೂರು: ‘2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಇದೇ 27ರಿಂದ 30ರವರೆಗೆ ಆನ್‌ಲೈನ್ ಕೌನ್ಸೆಲಿಂಗ್ ನಡೆಯಲಿದೆ’ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಸೇರಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

‘ಅಭ್ಯರ್ಥಿಗಳು ಜೇಷ್ಠತೆ ಆಧಾರಲ್ಲಿ ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ‌ಮಾಡಿಕೊಳ್ಳಬಹುದು. ಬಳಿಕ ಇಲಾಖೆಯಿಂದ ನೇಮಕಾತಿ ಆದೇಶ ನೀಡಲಾಗುವುದು. ನಂತರದ ಎರಡು ದಿನಗಳಲ್ಲಿ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕು. ಈ ಸಂದರ್ಭದಲ್ಲಿ ಅವರು ಮೂಲ ದಾಖಲೆಗಳನ್ನು ಪರಿಶೀಲನೆಗೆ ಒಪ್ಪಿಸಿ, ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂಥವರನ್ನು ಕೈಬಿಡಲಾಗುವುದು’ ಎಂದು ಅವರು ಹೇಳಿದ್ದಾರೆ.

ಈ ಹುದ್ದೆಗಳಲ್ಲಿ ವಾಣಿಜ್ಯ ವಿಷಯವು 1,830, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಜೆನೆಸ್ ಮ್ಯಾನೇಜ್‌ಮೆಟ್ 490, ಕಂಪ್ಯೂಟರ್ ಸೈನ್ಸ್ 910, ಭೌತವಿಜ್ಞಾನ562, ರಾಜ್ಯಶಾಸ್ತ್ರ 602, ರಸಾಯನವಿಜ್ಞಾನ 663, ಗಣಿತ 492, ಪ್ರಾಣಿವಿಜ್ಞಾನ 198, ಸಸ್ಯವಿಜ್ಞಾನ 212, ಮನೋವಿಜ್ಞಾನ 54, ಪರಿಸರ ವಿಜ್ಞಾನ 53, ಸಮಾಜಕಾರ್ಯ 80 ಮತ್ತು ಉರ್ದು 78 ಹುದ್ದೆಗಳನ್ನು ಹೊಂದಿವೆ ಎಂದು ಪ್ರದೀಪ್ ವರು ಮಾಹಿತಿ ನೀಡಿದ್ದಾರೆ.

ಆದ್ಯತೆ

ಅತಿಥಿ ಉಪನ್ಯಾಸಕರಾಗಿ ಈಗಾಗಲೇ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT