ಸೋಮವಾರ, ಅಕ್ಟೋಬರ್ 3, 2022
25 °C

ಕರ್ನಾಟಕದ ಎಸಿಬಿಯನ್ನು ರದ್ದು ಮಾಡಿದ ಹೈಕೋರ್ಟ್‌

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ.

ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ಸರ್ಕಾರ ಎಸಿಬಿ ರಚಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಂತರ ಇಂದು ನ್ಯಾ. ಬಿ ವೀರಪ್ಪ ಹಾಗೂ ನ್ಯಾ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಈ ಆದೇಶ ಮಾಡಿದೆ.

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಆದೇಶದಿಂದ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ.

ಆದೇಶ ನೋಡಿದ ನಂತರ ಪ್ರತಿಕ್ರಿಯೆ– ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಹೈಕೋರ್ಟ್ ಎಸಿಬಿ ರದ್ದುಗೊಳಿಸಿರುವ ವಿಚಾರದ ಕುರಿತು ಆದೇಶವನ್ನು ಇನ್ನು ನಾನು ನೋಡಿಲ್ಲ. ಆ ಆದೇಶವನ್ನು ನೋಡಿದ ನಂತರ ಪೂರ್ಣ ಪ್ರಮಾಣದಲ್ಲಿ ಪ್ರತಿಕ್ರಿಯಿಸುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. 

ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ  ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದರು. 

ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ ಆಗಿತ್ತು. ಕರ್ನಾಟದಲ್ಲಿ ಅಷ್ಟೇ ಅಲ್ಲ ಅನೇಕ ರಾಜ್ಯಗಳಲ್ಲಿ ಎಸಿಬಿ ಇದೆ.  ಎಸಿಬಿ ಲೋಕಾಯುಕ್ತದಲ್ಲಿ ಇರಬೇಕು. ಸ್ವತಂತ್ರ ಅಸ್ತಿತ್ವ ಬೇಡ ಎಂದು ಈಗ ಹೈಕೋರ್ಟ್ ತೀರ್ಮಾನಿಸಿದೆ ಎಂದರು.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು