ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪ: ಬಿ.ಎಸ್. ಯಡಿಯೂರಪ್ಪ, ಮಗ ವಿಜಯೇಂದ್ರಗೆ ಹೈಕೋರ್ಟ್ ನೋಟಿಸ್

Last Updated 5 ಆಗಸ್ಟ್ 2021, 14:23 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಂದಿನ ಸಿಎಂ ಯಡಿಯೂರಪ್ಪ ಮತ್ತು ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್‌ ವಿರುದ್ಧದ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಟಿ.ಜೆ. ಅಬ್ರಹಾಂ ದಾಖಲಿಸಿದ್ದ ಪ್ರಕರಣವನ್ನು ವಿಶೇಷ ನ್ಯಾಯಲಯ ರದ್ದುಪಡಿಸಿತ್ತು. ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಇದೀಗ ಹೈಕೋರ್ಟ್ ಯಡಿಯೂರಪ್ಪ ಮತ್ತು ಇತರರಿಗೆ ನೋಟಿಸ್ ನೀಡಿದೆ.

ಆಗಸ್ಟ್ 17 ರಂದು ಬೆಳಿಗ್ಗೆ 10.30 ಕ್ಕೆ ಸರಿಯಾಗಿ ಖುದ್ದಾಗಿ ಹಾಜರಾಗಲು ನ್ಯಾಯಾಲಯ ಈ ಮೂಲಕ ಸೂಚಿಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ಥಗಿತಗೊಂಡ ವಸತಿ ಯೋಜನೆಯನ್ನು ಪುನರಾರಂಭಿಸಲು ಯಡಿಯೂರಪ್ಪ, ಅವರ ಮಗ ಮತ್ತು ಸಂಬಂಧಿಕರು ಸೇರಿದಂತೆ ಇತರರು ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಅಬ್ರಹಾಂ ಆರೋಪಿಸಿದ್ದರು.

ಅಲ್ಲದೆ, ಈ ಕುರಿತಂತೆ ವಿರೋಧ ಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿತ್ತು. 2020ರಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು. ಆದರೆ, ಯಡಿಯೂರಪ್ಪ ಮತ್ತು ಅವರ ಮಗ ಆರೋಪವನ್ನು ತಳ್ಳಿಹಾಕಿದ್ದರು. ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT